ಉಬರಡ್ಕ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ

0

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತಿ ವಠಾರದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವನ್ನು ಆ.15ರಂದು ಆಚರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಚಿತ್ರಾಕುಮಾರಿ ಪಾಲಡ್ಕ ಧ್ವಜಾರೋಹಣ ನೆರವೇರಿಸಿ, 75ನೇ ಅಮೃತ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.


ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ, ಸದಸ್ಯರಾದ ಅನಿಲ್ ಬಳ್ಳಡ್ಕ, ಹರೀಶ್ ಉಬರಡ್ಕ, ಮಮತಾ ಕುದ್ಪಾಜೆ, ಭವಾನಿ ಮೂರ್ಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಗ್ರಾ.ಪಂ‌. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.