ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಅಮೃತ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯದ ಭಾವನ ಸುಗಮ ಸಂಗೀತ ಬಳಗದಿಂದ ದೇಶಭಕ್ತಿ ಗೀತೆಗಳ ಗಾಯನ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಅಮೃತ ಸ್ವಾತಂತ್ರ್ಯೋತ್ಸವನ್ನು ಆ.15ರಂದು ಆಚರಿಸಲಾಯಿತು.

ನಿವೃತ್ತ ಅಧ್ಯಾಪಕ ಶ್ರೀಕೃಷ್ಣ ನಾವಡ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.


ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ. ಸೀತಾರಾಮ, ಸಂಚಾಲಕ ಸುಧಾಕರ ಕಾಮತ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲೂಕು ಕಾರ್ಯವಾಹ ಸರವಣ, ಭಾವನ ಸುಗಮ ಸಂಗೀತದ ಗೋಪಾಲಕೃಷ್ಣ ಕೃಷ್ಣ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಸಂಸ್ಥೆಯ ಆಡಳಿತಾಧಿಕಾರಿ ಎನ್. ಗೋಪಾಲರಾವ್, , ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸೌಮ್ಯ ಕದಿಕಡ್ಕ, ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಹುಲಿಮನೆ ಅವರು ಮುಖ್ಯ ಅತಿಥಿಯಾಗಿದ್ದರು.


ಧ್ವಜಾರೋಹಣದ ಬಳಿಕ ಸುಳ್ಯದ ಭಾವನ ಸುಗಮ ಸಂಗೀತ ಬಳಗದ ಗೋಪಾಲ ಕೃಷ್ಣ ಕೆ.ಆರ್. ಅವರ ನೇತೃತ್ವದಲ್ಲಿ ದೇಶಭಕ್ತಿಗೀತೆ ಗಾಯನ ನಡೆಯಿತು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಆಚಾರ್ಯ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ವಿದ್ಯಾಸಂಸ್ಥೆಯ ಸಹಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.