ಬಲಿಷ್ಠ ಭಾರತವನ್ನು ನಿರ್ಮಿಸುವುದು ನಮ್ಮೆಲ್ಲರ ಹೊಣೆ : ಡಾ. ಕೆ.ವಿ ಚಿದಾನಂದ

0

ಭಾರತಕ್ಕೆ ಸುದೀರ್ಘ ಇತಿಹಾಸವಿದ್ದು, ಭಾರತೀಯರೆಲ್ಲರೂ ಈ ದೇಶದ ಅಭಿವೃದ್ಧಿಗಾಗಿ ಸಂಕಲ್ಪ ತೊಟ್ಟು ನಮ್ಮ ಕೊಡುಗೆ ನೀಡಬೇಕು. ಸ್ವಾತಂತ್ರ್ಯ ಪ್ರೇಮಿಗಳ ತ್ಯಾಗ, ಬಲಿದಾನ, ಆದರ್ಶ ಬದುಕಿನಿಂದ ಪ್ರೇರಣೆ ಪಡೆದು ದೇಶ ಸೇವೆಗಾಗಿ ಸದಾ ತೊಡಗಿಸಿಕೊಳ್ಳೋಣ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಇವರು ಎನ್.ಎಂ.ಸಿಯಲ್ಲಿ ನಡೆದ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣಗೈದು ಮಾತನಾಡಿದರು.
ವಿದ್ಯಾರ್ಥಿಗಳು ದೇಶ ಸೇವೆಯ ಕಾಯಕಲ್ಪದಲ್ಲಿ ತೊಡಗಿಸಿಕೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತಿನ ಬದುಕನ್ನು ರೂಢಿಸಿಕೊಳ್ಳಬೇಕು, ದೇಶ ಸೇವೆಗಾಗಿ ಸೈನ್ಯಕ್ಕೆ ಸೇರಲು ಆಸಕ್ತಿ ವಹಿಸಬೇಕು ಎಂದು ಹೇಳಿದರು.


ಈ ಸಂಧರ್ಭದಲ್ಲಿ, ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಎನ್‌ಸಿಸಿ ಕೆಡೆಟ್ ಅಭಿಷೇಕ್ ಅಡೂರು ನೇತೃತ್ವದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಯಿತು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ. ಎಂ ಬಾಲಚಂದ್ರ ಗೌಡ, ಡಾ. ಪ್ರಭಾಕರ ಶಿಶಿಲ, ಡಾ. ಪೂವಪ್ಪ ಕಣಿಯೂರು ಹಾಗೂ ನಿವೃತ್ತ ಉಪನ್ಯಾಸಕರಾದ ಪ್ರೊ. ಜವರೇಗೌಡ ಅವರು ಅತಿಥಿಗಳಾಗಿದ್ದರು. ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ.ಎಂ ಹಾಗೂ ಕಾಲೇಜಿನ ಎಲ್ಲಾ ಬೋಧಕ/ಬೋಧಕೇತರ ಸಿಬ್ಬಂದಿಗಳು ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತುರಾಯ ಹಾಗೂ ಕಾಲೇಜಿನ ಎಲ್ಲಾ ಬೋಧಕ/ಬೋಧಕೇತರ ಸಿಬ್ಬಂದಿಗಳು, ಕಾಲೇಜಿನ ವಿದ್ಯಾರ್ಥಿ ಸಂಘ, ಎನ್.ಸಿ.ಸಿ, ಎನ್.ಎಸ್.ಎಸ್, ರೇಂಜರ್ & ರೋವರ್‍ಸ್, ಯೂತ್ ರೆಡ್ ಕ್ರಾಸ್ ಘಟಕಗಳ ಸಂಯೋಜಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು.