ಸುಳ್ಯ ನ್ಯಾಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ನ್ಯಾಯಾಲಯದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸುಳ್ಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರಿ ಅರ್ಪಿತಾ ಇವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ.ಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಅಭಿಯೋಜಕರು, ವಕೀಲರ ಸಂಘದ ಪದಾಧಿಕಾರಿಗಳು, ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿಗಳು, ಪೋಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. ವಕೀಲರ ಸಂಘದ ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು ಸ್ವಾಗತಿಸಿ ಸಂಘದ ಕೋಶಾಧಿಕಾರಿ ಜಗದೀಶ್ ಡಿ.ಪಿ ವಂದಿಸಿದರು.

LEAVE A REPLY

Please enter your comment!
Please enter your name here