ಜಾಲ್ಸೂರು ಅಡ್ಕಾರು: ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ

0

ಜಾಲ್ಸೂರು ಅಡ್ಕಾರು ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವವನ್ನು ಆ.15ರಂದು ಆಚರಿಸಲಾಯಿತು.
ಜಮಾಅತ್ ಅಧ್ಯಕ್ಷ ಜಿ.ಎಂ. ಉಸ್ಮಾನ್ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಜಮಾಅತ್ ನ ಖತೀಬರು, ಮುಅಲ್ಲೀಂಮರು , ಜಮಾಅತ್ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ನೌಫಲ್ ಹಿಮಾನಿ ಅವರು ಸ್ವಾತಂತ್ರ್ಯೋತ್ಸವ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಹುಲ್ ಹಮೀದ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜುಮ್ಮಾ ಮಸೀದಿಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.