ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

0

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು.
ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ವಿ.ಸುಬ್ರಾಯ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಹಾಗೂ ಶಾಲಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಪಂಚಾಯತ್ ಸದಸ್ಯರು, ಫ್ರೆಂಡ್ಸ್ ಕ್ಲಬ್ ಪೈಲಾರಿನ‌ ಸದಸ್ಯರು,
ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದರು.