ಸಂಪಾಜೆ ಸಹಕಾರಿ ಸಂಘದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

0

ದ.ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಂದು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರು ಧ್ವಜಾರೋಹಣ ಮಾಡಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಸಂಘದ ನಿರ್ದೇಶಕರು ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಮಕ್ಕಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ಅವರು ಸ್ವಾಗತಿಸಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ರವರು ವಂದಿಸಿದರು.

LEAVE A REPLY

Please enter your comment!
Please enter your name here