ಬದ್ರಿಯಾ ಜುಮ್ಮಾ ಮಸ್ಜಿದ್ ನೆಕ್ಕಿಲ-ಪಂಜದಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

0

 

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಯನ್ನು ಬದ್ರಿಯಾ ಜುಮ್ಮಾ ಮಸ್ಜಿದ್ ನೆಕ್ಕಿಲ-ಪಂಜ ಇಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಉಮ್ಮರ್ ಸೀಗೆಯಡಿ ಧ್ವಜಾರೋಹಣವನ್ನು ನೆರವೇರಿಸಿದರು.

ಮುದರ್ರಿಸರಾದ ಝಿಯಾದ್ ಸಖಾಫಿ ಅವರು ಸಂದೇಶ ಭಾಷಣ ನಡೆಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರ ತ್ಯಾಗಗಳನ್ನು ಸ್ಮರಿಸಿದರು. ನಂತರ ತಾಜುಲ್ ಹುದಾ ದಅವಾ ದರ್ಸ್ ವಿದ್ಯಾರ್ಥಿಗಳಿಂದ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಸದರ್ ಮುಅಲ್ಲಿಂರಾದ ಅಬ್ಬಾಸ್ ಮುಸ್ಲಿಯಾರ್, ಅಝೀಝ್ ಸಅದಿ, ಶರೀಫ್ ಹಿಮಮಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ಸಾರಿದರು. ಜಮಾಅತ್ ಆಡಳಿತ ಸಮಿತಿ ಪದಾಧಿಕಾರಿಗಳು, ಸುನ್ನೀ ಸಂಘ ಕುಟುಂಬದ ಕಾರ್ಯಕರ್ತರು, ಜಮಾಅತಿನ ಸದಸ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ವಿತರಣೆ ನಡೆಯಿತು.

LEAVE A REPLY

Please enter your comment!
Please enter your name here