ಪಂಜದಲ್ಲಿ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯ ದ ಅಮೃತ ಮಹೋತ್ಸವ

0

 

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಪಂಜ , ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಪಂಜ,ಬಿ.ಎಂ.ಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಪಂಜ , ಶ್ರೀ ಉಳ್ಳಾಕುಲು ಕಲಾರಂಗ ಪಲ್ಲೋಡಿ , ಜೈ ಕರ್ನಾಟಕ ಯುವಕ ಮಂಡಲ ಅಳ್ಪೆ ಚಿಂಗಾಣಿಗುಡ್ಡೆ , ಕೃಪಾ ಯುವತಿ ಮಂಡಲ ಅಳ್ಪೆ-ಚಿಂಗಾಣಿಗುಡ್ಡೆ,ಪರಿವಾರ ಪಂಜ ರೈತ ಉತ್ಪಾದಕರ ಕಂಪೆನಿ, ಶಿವಾಜಿ ಯುವಕ ಮಂಡಲ ಕೂತ್ಕುಂಜ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಸೇವಾ ಭಾರತಿ ಪಂಜ,ವನಿತಾ ಸಮಾಜ ಪಂಜ,ಯುವ ಶಕ್ತಿ ಗೆಳೆಯರ ಬಳಗ ಪೊಳೆಂಜ ಪಂಜ, ಸಾರ್ವಜನಿಕ ಆರಾಧನಾ ಸಮಿತಿ ಪಂಜ, ಯುವ ತೇಜಸ್ಸು ಟ್ರಸ್ಟ್ ಪಂಜ, ಮಿತ್ರ ಮಂಡಲ ನಾಗತೀರ್ಥ ಜಂಟಿ ಸಹಯೋಗದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಆ.15.ರಂದು ಜರುಗಿತು.


ನ್ಯಾಯವಾದಿ ಮತ್ತು ಖ್ಯಾತ ಲೇಖಕ ವಿದ್ಯಾಧರ ಬಡ್ಡಡ್ಕ ರವರು ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಮರ ಸುಳ್ಯದ ಹಿರಿಮೆ’ ಕುರಿತು ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮ ದೇರಾಜೆ ಅಧ್ಯಕ್ಷತೆ ವಹಿಸಿದ್ದರು.ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಉಪಾಧ್ಯಕ್ಷ ಲಿಗೋಧರ
ಆಚಾರ್ಯ, ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನೇಮಿರಾಜ ಪಲ್ಲೋಡಿ ಹಾಗೂ
ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು, ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಜಾಕೆ, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಪವನ್ ಪಲ್ಲತ್ತಡ್ಕ,ಪಲ್ಲೋಡಿ
ಶ್ರೀ ಉಳ್ಳಾಕುಲು ಕಲಾರಂಗ ಅಧ್ಯಕ್ಷ ಕವನ್ ಪಲ್ಲೋಡಿ,ಜೈ ಕರ್ನಾಟಕ ಯುವಕ ಮಂಡಲದ ಅಧ್ಯಕ್ಷ ಕೇಶವ ಕೋಟ್ಯಡ್ಕ, ಕೃಪಾ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ವನಿತಾ ಕರಿಮಜಲು,ರಿಕ್ಷಾ ಚಾಲಕರ ಸಂಘದ ಪೂರ್ವಾಧ್ಯಕ್ಷ ಚಂದ್ರಶೇಖರ ದೇರಾಜೆ, ಶಿವಾಜಿ ಯುವಕ ಮಂಡಲದ ಪೂರ್ವಾಧ್ಯಕ್ಷ ರಜತ್ ಚಿದ್ಗಲ್ಲು, ಸಾರ್ವಜನಿಕ ಆರಾಧನಾ ಸಮಿತಿಯ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ಪಂಜ ಸೇವಾ ಭಾರತಿಯ ಉದಯ ಶಂಕರ್ ಅಡ್ಕ, ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಪಂಜ ಪೊಳೆಂಜ ಯುವ ಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ರಾಮಚಂದ್ರ ಕೆರೆಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರಮ್ಯಾ ದಿಲೀಪ್ ಬಾಬ್ಲುಬೆಟ್ಟು ರಾಷ್ಟ್ರ ಗೀತೆ ಹಾಡಿದರು. ಸಂತೋಷ್ ಜಾಕೆ ಸ್ವಾಗತಿಸಿದರು. ಸುಬ್ರಹ್ಮಣ್ಯ ಕುಳ ಪ್ರಾಸ್ತಾವಿಕವಾಗಿ ಮಾತನಾಡಿದರು.ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು . ಶಿವಪ್ರಸಾದ್ ಹಾಲೆಮಜಲು ವಂದಿಸಿದರು.

*ಐಕ್ಯತೆಯ ನಡಿಗೆ* :
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಂಘದಲ್ಲಿ ಧ್ವಜಾರೋಹಣ ನಡೆದು ಬೃಹತ್ ಐಕ್ಯತೆಯ ನಡಿಗೆ ಹೊರಟು ಪಂಜ ಪೇಟೆಯ ಮೂಲಕ ಸಾಗಿ ಬಂತು.ಮೆರವಣಿಗೆಯಲ್ಲಿ ಸಂಘದ ಆಡಳಿತ ಮಂಡಳಿಯವರು, ಸಿಬ್ಬಂದಿಗಳು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು,ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಐಕ್ಯತೆಯ ನಡಿಗೆಯಲ್ಲಿ ರಾಷ್ಟ್ರ ಧ್ವಜ , ಚೆಂಡೆ, ಬ್ಯಾಂಡ್ , ಘೋಷಣೆಗಳು ವಿಶೇಷ ಆಕರ್ಷಣೆಯಾಗಿತ್ತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ನಿರೂಪಿಸಿದರು.