ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ”

0

 

p>

ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ “ಆಜಾದಿ ಕಾ ಅಮೃತ ಮಹೋತ್ಸವ”ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರುಕ್ಮಯ್ಯ ದಾಸ್ ರವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಎರಡು ವರ್ಷಗಳ ಬಳಿಕ ಇದೀಗ ಬಹಳ ಅದ್ದೂರಿಯಿಂದ ವಿದ್ಯಾರ್ಥಿಗಳೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಸಾಧ್ಯವಾಗಿದೆ. ನಾವಿವತ್ತು ಆಚರಿಸುತ್ತಿರುವ ಸ್ವಾತಂತ್ರ್ಯೋತ್ಸವಕ್ಕೆ ಹಲವು ಮಹನೀಯರ ಕೊಡುಗೆ ಇದೆ ಹಾಗೂ ದೊರೆತ ಸ್ವಾತಂತ್ರ್ಯವನ್ನು ಉಳಿಸಿ ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ನುಡಿದರು.


ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮತ್ತು ಈಗಲೂ ದೇಶಕ್ಕಾಗಿ ಹೋರಾಡುತ್ತಿರುವ ಸೈನಿಕರನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬುಸಾಲಿ ಸ್ಮರಿಸಿದರು.
“ಆಜಾದಿ ಕಾ ಅಮೃತ ಮಹೋತ್ಸವ” ದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರುಕ್ಮಯ್ಯದಾಸ್, ಲೀಲಾವತಿ ರುಕ್ಮಯ್ಯದಾಸ್ , ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ , ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಕೀರ್ತಿ ಕುಮಾರಿ , ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀಮತಿ ಸರಿನಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here