ಸುಳ್ಯ ತಾಲೂಕು ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ,  ಧ್ವಜವಂದನೆ

0

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕೇಂದ್ರ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರೋತ್ಸವ ಅಮೃತಮಹೋತ್ಸವ ಆಚರಣೆ ಮತ್ತು ಧ್ವಜಾರೋಹಣ,ದ್ವಜವಂದನೆ ಕಾರ್ಯಕ್ರಮ ನಡೆಯಿತು.
ಸುಳ್ಯ ತಹಶಿಲ್ದಾರ್ ಅನೀತಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ದ್ವಜವಂದನೆ ಸ್ವೀಕರಿಸಿ ಶುಭ ಸಂದೇಶ ನೀಡಿದರು.
ಪೋಲೀಸ್ ಇಲಾಖೆ ,ಗೃಹರಕ್ಷಕ ದಳ,ಎನ್ ಸಿ ಸಿ,ನಿವೃತ್ತ ಯೋಧರು, ವಿವಿಧ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಹಿಸಿದ್ದರು. ಎ ಓ ಎಲ್ ಇ ಅಧ್ಯಕ್ಷ ಡಾ.ಕೆ ವಿ ಚಿದಾನಂದ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ,ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥ ರಾಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಮೊದಲಾದವರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು.
ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ‌ ನಡೆಯಿತು.

LEAVE A REPLY

Please enter your comment!
Please enter your name here