ಕೆವಿಜಿ ಅಮರಜ್ಯೋತಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

0
153

 

p>

 

ಆ.15ರಂದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜು, ಕೆವಿಜಿ ಐಪಿಎಸ್ ಹಾಗೂ ಕೆವಿಜಿ ಐಟಿಐ ಜಂಟಿ ಸಂಸ್ಥೆಗಳ ನೇತೃತ್ವದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕರು ಹಾಗೂ ತಾಲೂಕು ನಿವೃತ್ತ ಸೈನಿಕ ಸಂಘದ ಉಪಾಧ್ಯಕ್ಷರಾದ ಮಾಧವ ಬಿ.ಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಭವಿಷ್ಯದ ಭಾರತದ ನಿರ್ಮಾತೃರಾಗಿ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸೇನೆಯ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಓಎಲ್ಇ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡುತ್ತಾ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸೈನ್ಯದಲ್ಲಿ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಕೆ.ವಿ.ಜಿ.ಐ.ಪಿ.ಎಸ್.ನ ಪ್ರಾಂಶುಪಾಲರಾದ ಅರುಣ್, ಕೆ.ವಿ.ಜಿ. ಐಟಿಐ ಪ್ರಾಂಶುಪಾಲರಾದ ಚಿದಾನಂದ ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜು ಹಾಗೂ ಕೆವಿಜಿ ಐಪಿಎಸ್ ನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಿಹಿ ತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here