ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ- 76ನೇ ಸ್ವಾತಂತ್ರ್ಯೊತ್ಸವದ ಸಂಭ್ರಮದ ಆಚರಣೆ

0

 

ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ 76ನೇ ಸ್ವಾತಂತ್ರ್ಯೊತ್ಸವ ದಿನಾಚರಣೆಯು ಆ.15ರಂದು ಕಾಲೇಜು ವಠಾರದಲ್ಲಿ ಸಂಸ್ಥೆಯ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆಯಿತು. ರಾಷ್ಟ್ರ ಧ್ವಜಾರೋಹಣ ವನ್ನು ನಿವೃತ್ತ ಭೂಸೇನಾ ಯೋಧ ಶ್ರೀ ಕಟ್ಟೆಮನೆ ಲಕ್ಷ್ಮಣ ಗೌಡ ರವರು ನೆರವೇರಿಸಿ, ಪ್ರಸ್ತುತ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ಅವುಗಳ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಹಾರೈಸಿದರು. ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿಯವರು ಸ್ವಾಗತಿಸಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರವರು ವಂದಿಸಿದರು. ಗಣ್ಯರ ಸಮ್ಮುಖದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here