ಜಾಲ್ಸೂರು: ಪಯನೀರ್ ಪಬ್ಲಿಕ್ ಸ್ಕೂಲಿನಲ್ಲಿ ಅಮೃತ ಸ್ವಾತಂತ್ರ್ಯೋತ್ಸವ ಆಚರಣೆ

0
147

ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲಿನಲ್ಲಿ ಅಮೃತ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು.

p>

75ನೇ ವರ್ಷದ ಸ್ವಾತಂತ್ರ್ಯ ಅಮೃತಮಹೋತ್ಸವದಲ್ಲಿ ಶಾಲೆಯ ಸ್ಥಾಪಕ ಅಧ್ಯಕ್ಷ ಅಬ್ದುಲ್ ರಜಾಕ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರನೀಶ, ಇಕ್ಬಾಲ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಗೌಡ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಹ್ನವಿ ಉಪಸ್ಥಿತರಿದ್ದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿಗೀತೆ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಶಿಕ್ಷಕಿಯರಾದ ಹರಿಣಾಕ್ಷಿ, ಮಂಗಳಾ,ಜಯಂತಿ, ಆಜ್ಮೀನಾ,ಮಿಶ್ರಿಯ, ಪೂರ್ಣಿಮಾ ಸಹಕರಿಸಿದರು.

LEAVE A REPLY

Please enter your comment!
Please enter your name here