ಪಂಬೆತ್ತಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

 

ಪಂಬೆತ್ತಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅ. 15ರಂದು ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರು ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮುಖ್ಯ ಶಿಕ್ಷಕಿ ಶ್ರೀಮತಿ ಭವ್ಯ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತ್ಯಶಂಕರ ಕಲ್ಚಾರುರವರು ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ವಿದ್ಯಾಭಿಮಾನಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀ ಮತಿ ಸುಜಾತ ಸ್ವಾಗತಿಸಿದರು. ಕು. ಶರಣ್ಯ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಲತಾ ಧನ್ಯವಾದವಿತ್ತರು.