ಸುಳ್ಯ: 9 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

 

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ಆ.28 ರಂದು ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಆ.15 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಲ್ಲಿ ಬಿಡುಗಡೆ ಮಾಡಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರು ಪ್ರಾರ್ಥಿಸಿದರು. ಸುಳ್ಯ ತಾಲೂಕು ಮಾನ್ಯ ಸಹ ಸಂಘಚಾಲಕ್ ಪ್ರದ್ಯುಮ್ನ ಉಬರಡ್ಕ ರವರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಸೋಮಶೇಖರ ಪೈಕ, ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉಮೇಶ್ ಪಿ.ಕೆ, ಆರ್.ಎಸ್.ಎಸ್.ಜಿಲ್ಲಾ ಸಹ ಕಾರ್ಯವಾಹ ಡಾ.ಮನೋಜ್ ಅಡ್ಡಂತಡ್ಕ,ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕರೋಡಿ, ಪ್ರಭಾಕರನ್ ನಾಯರ್,ಪುರುಷೋತ್ತಮ ಕಿರ್ಲಾಯ, ಬಜರಂಗದಳ ಜಿಲ್ಲಾ ಸಹ ಸಂಚಾಲಕ ಲತೀಶ್ ಗುಂಡ್ಯ, ಕಾರ್ಯದರ್ಶಿ ‌ಪ್ರಕಾಶ್ ಯಾದವ್, ಖಜಾಂಜಿ ರಂಜಿತ್ ಸುಳ್ಯ ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.