ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

 

ದುಗ್ಗಲಡ್ಕ ಕೊಯಿಕುಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಧ್ವಜಾರೋಹಣ ನಡೆಯಿತು.


ಎಸ್.ಡಿ‌.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಮಾಧವ ಮೂಕಮಲೆ, ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ ನಾರಾಯಣ ಕೆ., ದುಗ್ಗಲಡ್ಕ ಹಾಲು ಸೊಸೈಟಿ ಮಾಜಿ ಅಧ್ಯಕ್ಷೆ ಶ್ರೀಮತಿ ವಾರಿಜ ಕೊರಗಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ, ಪೋಷಕರು,ಊರವರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here