ನಡುಗಲ್ಲು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಅಮೃತ ಮಹೋತ್ಸವ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು. ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು. ಮಕ್ಕಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ, ಮೋಹನ್ ಸುಬ್ರಮಣ್ಯ ಇವರು ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ನೀಡಿ ಪ್ರೋತ್ಸಾಹಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಡ್ಡಿಯ ಹಣವನ್ನು ವಿತೆರಿಸಲಾಯಿತು.

LEAVE A REPLY

Please enter your comment!
Please enter your name here