ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆ. 15ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ನೆರವೇರಿಸಿ ಶುಭಾಶಂಸನೆ ಮಾಡಿದರು.

ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ವೆಂಕಟ್ರಮಣ ಭಟ್ ವಹಿಸಿದ್ದರು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷರು ,ಪ್ರಗತಿಪರ ಕೃಷಿಕರೂ ಆದ ವಿಶ್ವನಾಥ ರೈ ಕಳಂಜ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂಸ್ಥೆಗಳ ಸಂಚಾಲಕ ಪಿ.ಜಿ.ಎಸ್.ಎನ್ ಪ್ರಸಾದ್ ಬಾಳಿಲ, ಕೋಶಾಧಿಕಾರಿ ಯು ರಾಧಾಕೃಷ್ಣ ರಾವ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಧನಂಜಯ ಹಾಗೂ ಪಿ.ಟಿ.ಎ ಅಧ್ಯಕ್ಷರಾದ ಶಿವಪ್ರಸಾದ ಉಪಸ್ಥಿತರಿದ್ದರು .ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು. ವಿದ್ಯಾರ್ಥಿಗಳು ಸ್ವಾತಂತ್ರ್ಯದ ಕುರಿತು ಭಾಷಣವನ್ನು ಮಾಡಿದರು. ಅಧ್ಯಾಪಕರ ಪರವಾಗಿ ವೆಂಕಟೇಶಕುಮಾರ ಯು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಸಾಹಿತ್ಯಿಕ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಜನಕ ಕೆ, ಕ್ರೀಡಾ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಗಗನ್ ಬಿ ಮತ್ತು ಧನ್ಯಶ್ರೀ ವಾಚಿಸಿದರು. ಮುಖ್ಯಶಿಕ್ಷಕರಾದ ಯಶೋಧರ ಎನ್ ಸ್ವಾಗತಿಸಿ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ಇಂಚರ ಮತ್ತು ಧನ್ಯಶ್ರೀ ನಿರ್ವಹಿಸಿದ ಕಾರ್ಯಕ್ರಮವನ್ನು ಶ್ರೇಯಾ ವಂದಿಸಿದರು. ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಅಧ್ಯಾಪಕರಾದ ಮೋಹನ್ ಕೆ.ಸಿ ಮತ್ತು ಅರವಿಂದ ಕಾಯಾರ ನಿರ್ವಹಿಸಿದರು.

LEAVE A REPLY

Please enter your comment!
Please enter your name here