ಸ.ಕಿ.ಪ್ರಾ.ಶಾಲೆ ಕೇನ್ಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಕೇನ್ಯ ಸ.ಹಿ.ಪ್ರಾ. ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದ್ಮನಾಭ ರೈ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಪುಟ್ಟಣ್ಣ ಗೌಡ ಕೇನ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್ ರೈ ಕೇನ್ಯ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಟೀನಾ, ಹಿರಿಯ ವಿದ್ಯಾರ್ಥಿ ಶೃದ್ಧಾ ರೈ ಪೋಷಕರಾದ ವಾಸುದೇವ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ರೇವತಿ ಆಜಾದಿ ಕಾ ಅಮೃತ್ ಮಹೋತ್ಸವ ಸ್ಪರ್ಧೆಯಲ್ಲಿ ಗೆದ್ದ ಮಕ್ಕಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿದರು. ಗ್ರಾಮ ವಿಕಾಸನ ಸಮಿತಿಯಿಂದ ಇಕೊ ಬ್ರಿಕ್ಸ್ ಕಾರ್ಯಕ್ರಮ ನಡೆಸಿ ಅತಿ ಹೆಚ್ಚು ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ರೇವತಿ ನಡೆಸಿಕೊಟ್ಟರು. ಗೌರವ ಶಿಕ್ಷಕಿ ಶ್ರೀಮತಿ ಅಂಕಿತಾ ಸ್ವಾಗತಿಸಿ ಅತಿಥಿ ಶಿಕ್ಷಕಿ ತುಲಶ್ರಿ ವಂದಿಸಿದರು.