ಬಳ್ಪ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ

0

 

ಬಳ್ಪ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಆ.15ರಂದು ಜರುಗಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್ ಬುಡೆಂಗಿ ಇವರು ನೆರವೇರಿಸಿದರು.ಧ್ವಜಾರೋಹಣದ ನಂತರ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವಿವಿಧ ರಾಷ್ಟ್ರನಾಯಕರ ವೇಷಭೂಷಣದೊಂದಿಗೆ ವಿದ್ಯಾರ್ಥಿಗಳು ಸಂಭ್ರಮಿಸಿದರು.ಈ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು,ಪಂಚಾಯತ್ ನ ಎಲ್ಲಾ ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಶಾಲೆಯ ಎಸ್.ಡಿ.ಎಂ.ಸಿ.ಯವರು,ಶಿಕ್ಷಕರು,ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಕ್ಕಳು ಮತ್ತು ಶಾಲೆಯ ಎಲ್ಲಾ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಗ್ರಾಮ ವಿಕಾಸ ಪ್ರತಿಷ್ಠಾನ ವತಿಯಿಂದ ನಡೆಸಿದ ಸ್ವಚ್ಛ ಅಭಿಯಾನ ಬಗ್ಗೆ ನಡೆಸಿದ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಕೆ ಸ್ವಾಗತಿಸಿ, ಪಿ.ಡಿ.ಓ.ನಾರಾಯಣ ಬಟ್ಟೋಡಿ ವಂದಿಸಿದರು.ಸಹಶಿಕ್ಷಕ ಆನಂದ ವೈ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here