ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ನಡೆಯಿತು. ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ನೆರವೇರಿಸಿದರು. ಮಡಪ್ಪಾಡಿ ಸೊಸೈಟಿಯಿಂದ ಮೆರವಣಿಗೆ ಬಂದು ಯುವಕ ಮಂಡಲದ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಶಕುಂತಲಾ ಕೇವಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮಪಾಲ ತಳೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ, ಯುವಕ ಮಂಡಲದ ಅಧ್ಯಕ್ಷ ಧನ್ಯಕುಮಾರ್ ದೇರುಮಜಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್, ಎಸ್.ಡಿ.ಎಂ.ಸಿ‌. ಅಧ್ಯಕ್ಷ ಮಾಧವ ಶೀರಡ್ಕ, ಪಂಚಾಯತ್ ಉಪಾಧ್ಯಕ್ಷೆ ಉಷಾ ಜಯರಾಮ್, ಸದಸ್ಯೆ ಶರ್ಮಿಳಾ ಕಜೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾರಾನಾಥ ಅಂಬೆಕಲ್ಲು ಹಾಗೂ ಗೋಪಾಲಕೃಷ್ಣ ಪಾರೆಮಜಲುರವರನ್ನು ಗೌರವಿಸಲಾಯಿತು. ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾತು.

ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ,ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಮತ್ತು ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here