ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

0

 

p>

ಆ15ರಂದು ಪೆರಾಜೆ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ  ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ದೇಶಪ್ರೇಮ, ಆದರ್ಶ ವ್ಯಕ್ತಿತ್ವ, ಪರಿಸರದ ಬಗೆಗಿನ ಕಾಳಜಿ, ದೇಶ ಕಟ್ಟುವಲ್ಲಿ ನಮ್ಮ ಕರ್ತವ್ಯದ ಬಗ್ಗೆ ತಿಳಿಸಿದ ಅವರು 75 ನೇ ವರ್ಷದ ಅಮೃತ ಮಹೋತ್ಸವದ ಶುಭಾಶಯಕೋರಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಪಿ ಎಂ, ಸಂಘದ ನಿರ್ದೇಶಕರುಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ರವಿಪ್ರಕಾಶ್ ಸಿ ಪಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಲೋಕೇಶ್ ಎಚ್ ಕೆ ಸ್ವಾಗತಿಸಿ ಸಿಬ್ಬಂದಿ ಗೋಪಾಲಕೃಷ್ಣ ಎಂಆರ್ ವಂದನಾರ್ಪಣೆ ಸಲ್ಲಿಸಿದರು.

 

LEAVE A REPLY

Please enter your comment!
Please enter your name here