ಯೇನೆಕಲ್ಲು ಸರಕಾರಿ ಪ್ರೌಢಶಾಲೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

0

 

ಯೇನೆಕಲ್ಲು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆ. 15ರಂದು ಆಚರಿಸಲಾಯಿತು.

ಯೇನೆಕಲ್ಲಿನ ಮಾಜಿ ಯೋಧ ಹರಿಶ್ಚಂದ್ರ ಪರಮಲೆ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಶಿಕ್ಷಕಿ ಅನ್ನಪೂರ್ಣ ಸ್ವಾಗತಿಸಿ, ಶಿಕ್ಷಕಿ ದೀಪ ವಂದಿಸಿದರು. ಸಭಾಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಮೋಹನ ಮತ್ತು ಸೀತಾರಾಮ್ ಕೆಬ್ಬೋಡಿಯವರು ಶಾಲೆಗೆ ಎರಡು ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here