ಕೆ.ವಿ.ಜಿ ಪಾಲಿಟೆಕ್ನಿಕ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ.

0

ಕೆ.ವಿ.ಜಿ ಪಾಲಿಟೆಕ್ನಿಕ್‌ನಲ್ಲಿ ಆ. 15ರಂದು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.

ಅಕಾಡೆಮಿ ಆಫ್ ಲಿಬೆರಲ್ ಎಜುಕೇಶನ್ ನ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರೂ ಆದ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹಿರಿಯರ ತ್ಯಾಗ ಮತ್ತು ಬಲಿದಾನದಿಂದ ನಾವು ಸ್ವಾತಂತ್ರ್ಯವನ್ನು ಪಡೆದು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಅವರ ಪ್ರೇರಣಾದಾಯಕ ಬದುಕು ನಮಗೆಲ್ಲ ದಾರಿ ದೀಪವಾಗಲಿ. ವಿಧ್ಯಾರ್ಥಿಗಳುಉತ್ತಮ ಶಿಸ್ತು ಮತ್ತು ಸಂಸ್ಕಾರವನ್ನು ರೂಢಿಸಿಕೊಂಡು ದೇಶದ ಸಮಗ್ರ ಅಭಿವೃದ್ದಿಗೆ ತನ್ನದೆ ಕೊಡುಗೆ ನೀಡಬೇಕು ಎಂದು ಶುಭ ಹಾರೈಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಿವೃತ್ತ ಯೋಧ ನಾರಾಯಣ ಅರಂಬೂರುರವರು ನಮ್ಮ ದೇಶದ ತ್ರಿವರ್ಣ ಧ್ವಜಕ್ಕೆ ತುಂಬಾ ಮಹತ್ವವಿದೆ. ವಿಧ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಪ್ರಾಮಾಣಿಕತೆ ಮುಖ್ಯ. ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ದೈಹಿಕ ಕ್ಷಮತೆಯೊಂದಿಗೆ ವಿಧ್ಯಾರ್ಥಿ ಜೀವನವನ್ನು ರೂಪಿಸಬೇಕು. ಸೈನ್ಯ ಮತ್ತು ಭದ್ರತೆಯ ವಿಭಾಗದಲ್ಲಿ ಹೆಚ್ಚಿನ ವಿಧ್ಯಾರ್ಥಿಗಳು ಭಾಗಿಯಾಗಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಭಾರತ ಇಂದು ಎಲ್ಲಾ ದೇಶಗಳಿಂದಲು ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುವಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ಕರೆ ನೀಡಿದರು.

ಕೆ.ವಿ.ಜಿ ಪಾಲಿಟೆಕ್ನಿಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಉಜ್ವಲ್ ಊರುಬೈಲು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀಧರ್ ಎಂ.ಕೆ, ಕಛೇರಿ ಅಧೀಕ್ಷರಾದ ಶಿವರಾಮ ಕೇರ್ಪಳ, ಎಲ್ಲಾ ವಿಭಾಗದ ಮುಖ್ಯಸ್ಥರುಗಳು, ವಿಧ್ಯಾರ್ಥಿ ಕ್ಷೇಮಾಧಿಕಾರಿಗಳಾದ ಅನಿಲ್ಮತ್ತು ಹರೀಶ್ ಕುಂಚಡ್ಕ ಸಹಿತ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ನಡೆಯಿತು.