ದೋಳ್ತೋಡಿ ಅಮೃತ ಸರೋವರ ದಂಡೆಯ ಮೇಲೆ ಸ್ವಾತಂತ್ರ್ಯೋತ್ಸವ

0

 


ಸ್ವಾತಂತ್ರ್ಯದ‌ ಅಮೃತ ಮಹೋತ್ಸವದ‌ ಅಂಗವಾಗಿ ಸುಳ್ಯ ತಾಲೂಕಿನ ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ತೋಡಿ ಅಮೃತ ಸರೋವರದ ದಂಡೆಯ ಮೇಲೆ ನಿವೃತ ಸೈನಿಕರಾದ‌ ಸುರೇಶ್ ರವರು ಧ್ವಜಾರೋಹಣ ನೆರವೇರಿಸಿದರು.

ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರು ಕೆರೆಯ ದಂಡೆಯ ಮೇಲೆ ಗಿಡ ನೆಟ್ಟು ನಾಮ ಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಲ ಶಪಥವನ್ನು ಭೋದಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾಂತ್ರಿಕ ಸಂಯೋಜಕರು( ಸಿವಿಲ್, ಕೃಷಿ), ತಾಲೂಕು ಐಇಸಿ ಸಂಯೋಜಕರು, ಬಿ.ಎಫ್.ಟಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.