ಎಣ್ಮೂರು ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏಣ್ಮೂರಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ಶರೀಫ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಸ್ವಾತಂತ್ರ ಹೋರಾಟಗಾರರ ವೇಷಭೂಷಣಗಳ, ಸ್ಕೌಟ್ ದಳಗಳು, ಮ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಪೋಷಕರನ್ನು ಒಳಗೊಂಡಂತೆ ಸ್ವಾತಂತ್ರ್ಯೋತ್ಸವದ ಮೆರವಣಿಗೆಯನ್ನು ಬ್ಯಾಂಡ್ ಸೆಟ್ ಗಳ ಮೂಲಕ ನಿಂತಿಕಲ್ಲು ಸರ್ಕಲ್ ನ ತನಕ ನಡೆಸಲಾಯಿತು.

 

ನಂತರ ನಡೆಸಿದ ಸಭಾ ಕಾರ್ಯಕ್ರಮ ದಲ್ಲಿ ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರ ಎಣ್ಮುರು ಇಲ್ಲಿನ ಆಡಳಿತ ಮುಕ್ತೇಸರರಾದ  ರಘುನಾಥ್ ರೈ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರೋತ್ಸವದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.  ಲೋಕನಾಥ್ ರೈ ಪಟ್ಟೆ ಅವರು ಕೂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಎಡಮಂಗಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ರೇವತಿ ಹಾಗೂ ಎಡಮಂಗಲ ಗ್ರಾಮ ಪಂಚಾಯಿತಿ ಸದಸ್ಯರುಗಳಾದ  ಮೈಲಪ್ಪ ಗೌಡ, ಶ್ರೀಮತಿ ಸವಿತ ಕಲ್ಲೇರಿ, ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಭುವನೇಶ್ವರಿ ಕೆ ಸ್ವಾಗತಿಸಿ ಅತಿಥಿ ಶಿಕ್ಷಕಿಯಾದ ಗುಲಾಬಿ ವಂದಿಸಿದರು. ಸಹ ಶಿಕ್ಷಕಿಯಾದ ಶ್ರೀಮತಿ ಸುಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಭೋಜನದ ವ್ಯವಸ್ಥೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.