ಬೆಳ್ಳಾರೆ : ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುವ ಗುಂಡಿ

0
114

 

ಬೆಳ್ಳಾರೆ ಸಿಂಡಿಕೇಟ್ ಬ್ಯಾಂಕ್ ಸಮೀಪ ಮುಖ್ಯ ರಸ್ತೆಯಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿದ್ದು ಅಪಾಯವನ್ನು ಆಹ್ವಾನಿಸುವಂತಿದೆ.
ಇಲ್ಲಿ ಪ್ರತೀ ವರ್ಷವೂ ಮಳೆಗಾಲದಲ್ಲಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ.

ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.
ಅಲ್ಲದೆ ಪಕ್ಕದ ಅಂಗಡಿವರಿಗೂ ಸಮಸ್ಯೆಯಾಗುತ್ತಿದೆ.
ಈ ಬಗ್ಗೆ ಹಲವು ಬಾರಿ ಪತ್ರಿಕೆಯಲ್ಲಿ ,ಸಾಮಾಜಿಕ ಜಾಲತಾಣದಲ್ಲಿ ವರದಿಗಳು ಬಂದರೂ ಅಧಿಕಾರಿಗಳಾಗಲಿ,ಜನಪ್ರತಿನಿಧಿಗಳಾಗಲಿ ಸ್ಪಂದಿಸಿಲ್ಲ.
ಈಗ ರಸ್ತೆ ಮಧ್ಯದಲ್ಲಿ ದೊಡ್ಡ ಗುಂಡಿ ನಿರ್ಮಾಣವಾಗಿದೆ.
ಈ ಗುಂಡಿಗೆ ಹಲವು ವಾಹನಗಳು,ಬೈಕ್ ಸವಾರರೂ ಬಿದ್ದು ಗಾಯಗೊಂಡಿದ್ದು ಕೂಡಲೇ ಈ ಗುಂಡಿಯನ್ನು ಮುಚ್ಚುವ ಕಾರ್ಯ ಆಗಬೇಕಾಗಿದೆ.
ಇಲಾಖಾಧಿಕಾರಿಗಳು,ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here