*ಅಡ್ಪಂಗಾಯ ಶಾಲೆಯಲ್ಲಿ ಅಮೃತ ಸ್ವಾತಂತ್ರ್ಯೋತ್ಸವ ಆಚರಣೆ

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಸ.ಹಿ.ಪ್ರಾ.ಶಾಲೆಯಲ್ಲಿ 75ನೇ ವರ್ಷದ ಅಮೃತ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.

p>

ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಅಶ್ರಫ್ ಸಹದಿಯವರು ಧ್ವಜಾರೋಹಣಗೈದು ಶುಭಹಾರೈಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಸತ್ಯವತಿ, ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ್,
ಸದಸ್ಯರುಗಳಾದ ರಾಹುಲ್ ಅಡ್ಪಂಗಾಯ , ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಪ್ರಶಾಂತ್,,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ಕಾರ್ಯದರ್ಶಿ ಸಿದ್ದಿಕ್ ಕಲ್ತಡ್ಕ ಮೊದಲಾದವರು ಉಪಸ್ಥಿತಿ ತರಿದ್ದರು. ಶಾಲಾ ಮುಖ್ಯೋಪಧ್ಯಾಯಿನಿ ಶ್ರೀಮತಿ ಧನಲಕ್ಷ್ಮಿ.ಬಿ. ಸ್ವಾಗತಿಸಿ ,ಸಹ ಶಿಕ್ಷಕಿ ಶ್ರೀಮತಿ ಸುಗಂಧಿ ಎ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ವೀಣಾ ‌ಬಿ. ಕಾರ್ಯಕ್ರಮ ನಿರೂಪಿಸಿದರು. ಪುಟಾಣಿ ಮಕ್ಕಳು ದೇಶಪ್ರೇಮ ಮೂಡಿಸುವ ವಿವಿಧ ಕಾರ್ಯಕ್ರಮ ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಎಸ್ .ಡಿ.ಎಂ.ಸಿ.ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಹಾಗೂ, ಉಮ್ಮರ್ .ಬಿ, ಎಸ್.ಡಿ.ಎಂ.ಸಿ.ಸದಸ್ಯರಗಳು, ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀಮತಿ ರಾಜೀವಿ.ಎ. ಶ್ರೀಮತಿ ಸುರೇಖಾ ರೈ.ಡಿ. ಹಾಗೂ ಕುಮಾರಿ ಗೌರಿಯವರು ಸಹಕರಿಸಿದರು.

LEAVE A REPLY

Please enter your comment!
Please enter your name here