ಪ್ರವೀಣ್ ನೆಟ್ಟಾರು ಹತ್ಯೆ : ಪ್ರಧಾನ ಆರೋಪಿಗಳಿಗೆ ನ್ಯಾಯಾಂಗ ಬಂಧನ

0

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

ಹತ್ಯೆ ಪ್ರಕರಣದ ಪ್ರಧಾನ ಆರೋಪಿಗಳಾದ ಮಹಮ್ಮದ್ ಶಿಹಾಬ್, ಅಬ್ದುಲ್ ಬಶೀರ್, ರಿಯಾಜ್‌ರನ್ನು ಪೊಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅವರಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿತ್ತು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಆರೋಪಿಗಳನ್ನು ಮತ್ತೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆಗಸ್ಟ್ ೨೪ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು ಎಂದು ತಿಳಿದುಬಂದಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಆರೋಪಿಗಳನ್ನು ವಿವಿಧ ಕಡೆಗಳಿಗೆ ಕೊಂಡೊಯ್ದು ಮಹಜರು ನಡೆಸಲಾಗಿದೆ ಎಂದು ತಿಳಿದು ಬಂದಿದೆ.