ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನವೋದಯ ಸ್ವ – ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

0

 

 

ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನವೋದಯ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಆ.16 ರಂದು ಬೆಳ್ಳಾರೆ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.
ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಶಶಿಕಮಾರ್ ಬಾಲ್ಯೊಟ್ಟು ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಮಾಡಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ, ನಿರ್ದೇಶಕರಾದ ಶ್ರೀರಾಮ ಪಾಟಾಜೆ, ಕರುಣಾಕರ ಆಳ್ವ,ವಿಠಲದಾಸ್ ,ರಮೇಶ್ ರೈ ಮಾರ್ಲ,ಪಾಣಾಜೆ ಸೊಸೈಟಿ ಮಾಜಿ ನಿರ್ದೇಶಕ ಜಗನ್ಮೋಹನ ರೈ, ಮೆನೇಜರ್ ಸಂತೋಷ್, ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.