ಎಣ್ಣೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

0

 

p>

ಎಣ್ಣೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ
ಆ. 15ರಂದು ಜರುಗಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರನಾಥ ಪಟೋಳಿ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆಗಳ ಗಾಯನ ನಡೆಯಿತು. ಆಜಾದಿಕಾ ಅಮೃತ ಮಹೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಳ್ಪ ಗ್ರಾಮ ವಿಕಾಸ ಸಮಿತಿಯಿಂದ ಸ್ವಚ್ಛತಾ ಅಭಿಯಾನಕ್ಕೆ ಪೂರಕವಾಗಿ ಪ್ಲಾಸ್ಟಿಕ್ ಕಸವನ್ನು ಪ್ಲಾಸ್ಟಿಕ್ ಬಾಟಲಿಗೆ ತುಂಬಿಸುವ ಸ್ಪರ್ಧೆಯನ್ನು ಏರ್ಪಡಿಸಿದರು. ಇದರಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ವೇದಿಕೆಯಲ್ಲಿ ಚಂದ್ರನಾಥ ಪಟೋಳಿ, ಶ್ರೀಮತಿ ಸುಚಿತ್ರ, ಹಿರಿಯರಾದ ತಮ್ಮಯ್ಯ ಗೌಡ ಬಿಟ್ಟಂಗಿಲ, ಶಾಲಾ ಮುಖ್ಯ ಶಿಕ್ಷಕಿ ಶಾಲಿನಿ ಎಂ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಲಿನಿ ಎಂ ಸ್ವಾಗತಿಸಿ ವಂದಿಸಿದರು. ಕಾವ್ಯ ಎ ನಿರೂಪಣೆಗೈದರು.

LEAVE A REPLY

Please enter your comment!
Please enter your name here