ಗುತ್ತಿಗಾರು : ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 75 ನೇ ಸ್ವಾತಂತ್ರೋತ್ಸವ

0

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರಿನಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅಚಳ್ಳಿ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಮಹೇಶ್ ಕುಪ್ಪತಡ್ಕ ರವರನ್ನು ಹಾಗೂ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ನಂತರ ನಿವೃತ್ತ ಪ್ರಾಂಶುಪಾಲರಾದ ಪ್ರಭಾಕರ ಕಿರಿಭಾಗ ಇವರಿಂದ ಸ್ವಾತಂತ್ರ್ಯ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ ಪಿ, ಮುಖ್ಯೋಪಾಧ್ಯಾಯರು, ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಮೀಳಾ, ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ಹಾಗೂ ಜಗದೀಶ್, ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಲೊಕೇಶ್ವರ ಡಿ.ಆರ್., ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಮಂಜುನಾಥ ಯು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ವೇದಿಕೆ ಯಲ್ಲಿ ಉಪಸ್ಥಿತರಿದ್ದರು. 2018-19 ಹಾಗೂ 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕೊರೋನ ಕಾರಣದಿಂದ ವಿತರಿಸದೆ ಬಾಕಿ ಉಳಿದಿದ್ದ ವಿದ್ಯಾರ್ಥಿ ದತ್ತಿನಿಧಿ ಬಹುಮಾನಗಳನ್ನು ಇದೇ ಸಂದರ್ಭ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಎಸ್.ಡಿ.ಯಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಕಾಲೇಜು ಉಪನ್ಯಾಸಕ ವೃಂದ, ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯರಾದ ನೆಲ್ಸನ್ ಕ್ಯಾಸ್ಥಿಲಿನೋ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಸವಿತಾ ಕುಮಾರಿ ವಂದಿಸಿದರು, ಹಿಂದಿ ಶಿಕ್ಷಕರಾದ ಪ್ರಸನ್ನ.ವೈ.ಬಿ. ಕಾರ್ಯಕ್ರಮ ನಿರೂಪಿಸಿದರು.