ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

0

 

ಶಾಲೆಗೆ ಮೊಬೈಲ್ ರಿಟೈಲರ್ ಅಸೋಸಿಯೇಷನ್ ವತಿಯಿಂದ ಕಂಪ್ಯೂಟರ್ ಕೊಡುಗೆ

ಸುಳ್ಯ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಎಂ ಬಿ ಫೌಂಡೇಷನ್ ಅಧೀನದಲ್ಲಿ ಕಾರ್ಯಚರಿಸುತ್ತಿದ್ದ ಸಾಂದೀಪ್ ವಿಶೇಷ ಮಕ್ಕಳಶಾಲೆಯಲ್ಲಿ‌ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಪೊಲೀಸ್ ಅಧಿಕಾರಿ ರಾಮದಾಸ್ ಗೌಡ ಉದ್ಘಾಟಿಸಿದರು.
ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಶಿಲಾ ಕುರುಂಜಿ, ಸದಸ್ಯೆ ಕಿಶೋರಿ ಶೇಟ್,ಶಶಿಕಲಾ ನಿರಬಿದರೆ,ಶಿಲ್ಪಾ ಸುದೇವ್,ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸ್ವಾತಂತ್ರೋತ್ಸವ ಆಚರಣೆ ಯೊಂದಿಗೆ ಆಟಿ ಆಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ವೈ ಕೆ ರಮಾ ಆಟಿ ಆಚರಣೆ ಮತ್ತು ಆಟಿ‌ ತಿಂಗಳ ಮಹತ್ವದ ಬಗ್ಗೆ ‌ಮಾತನಾಡಿದರು.
ಜಿಲ್ಲಾ ಮಹಿಳಾ ಮಂಡಲ ಒಕ್ಕೂಟ ಕೋಶಾಧಿಕಾರಿ ಚಂದ್ರಾಕ್ಷಿ ಜೆ ರೈ ,ಮಹಿಳಾ ಸಮಾಜದ ಗೌರವ ಸಲಹೆಗಾರರಾದ ನೇತ್ರಾವತಿ ಪಡ್ಡಂಬೈಲು,ಕೋಶಾಧಿಕಾರಿ ರಾಧಮಣಿ,ಸುಧಾ ಶ್ರೀಧರ್, ಸುಜಾತ ರೈ,ಉಪಸ್ಥಿತರಿದ್ದರು.
ಮಹಿಳಾ ಸಮಾಜದ ಅಧ್ಯಕ್ಷೆ ಪುಷ್ಪಾ ರಾಧಾಕೃಷ್ಣ ಕಾರ್ಯಕ್ರಮ ನಡೆಸಿಕೊಟ್ಟರು.
ಎಂ ಬಿ ಫೌಂಡೇಷನ್ ಅಧ್ಯಕ್ಷ ಎಂ ಬಿ ಸದಾಶಿವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಬಗ್ಗೆ ಮಾತನಾಡಿದರು.
ಶಾಲೆ ಸಂಚಾಲಕಿ ಹರಿಣಿ ಸದಾಶಿವ ಸ್ವಾಗತಿಸಿ ಕಾರ್ಯಕ್ರಮದಲ್ಲಿ ನಿರೂಪಿಸಿದರು*
*ಮೊಬೈಲ್ ರಿಟೈಲರ್ ಅಸೋಸಿಯೇಷನ್ ವತಿಯಿಂದ ಕಂಪ್ಯೂಟರ್ ಕೊಡುಗೆ*
ಸುಳ್ಯ ತಾಲೂಕು ಮೊಬೈಲ್ ರಿಟೈಲರ್ ಅಸೋಸಿಯೇಷನ್ ವತಿಯಿಂದ ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಸ್ಮಾರ್ಟ್ ತರಗತಿ ಬೇಕಾಗುವ ಕಂಪ್ಯೂಟರ್ ನ್ನು ಕೊಡುಗೆಯಾಗಿ ‌ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮೊಬೈಲ್ ರಿಟೈಲರ್ ಅಸೋಸಿಯೇಷನ್ ಅಧ್ಯಕ್ಷ ಶೈಲೇಂದ್ರ ಸರಳಾಯ,ತಾಲೂಕು ಅಧ್ಯಕ್ಷ ಶಬ್ಬೀರ್ ಓರ್ಕುಟ್,ಕಿರಣ ಸ್ವಸ್ತಿಕ್ ,ಶಿಹಾಬ್ ಕಟ್ಟೆಕ್ಕಾರ್, ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮ ಕೊನೆಯ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತ ಸಾಂದೀಪ್ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ಎಂ ಬಿ ಫೌಂಡೇಷನ್ ಟ್ರಸ್ಟಿ ಗಳಾದ ಸೂರಯ್ಯ,ಪತ್ರಕರ್ತ ಶರೀಫ್ ಜಟ್ಟಿಪಳ್ಳ ಪ್ರೋ ಮಧುಕುಮಾರ್ ಸಹಕರಿಸಿದರು.