ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಯಶಸ್ವಿ ಯುವಕ ಮಂಡಲಕ್ಕೆ ವಿಪತ್ತು ನಿವಾರಣಾ ಅಗತ್ಯ ಸಾಮಗ್ರಿಗಳ ಕೊಡುಗೆ

0

 

 

ಯಶಸ್ವಿ ಯುವಕ ಮಂಡಲದ ಯಶಸ್ವಿ ಕಾರ್ಯವನ್ನು ಗುರುತಿಸಿ, ಇನ್ನೂ ಹೆಚ್ಚಿನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಪತ್ತು ನಿವಾರಣಾ ಅಗತ್ಯ ಸಾಮಗ್ರಿಗಳನ್ನು ಗ್ರಾಮ ಪಂಚಾಯತ್ ಸಂಪಾಜೆ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ವಿತರಿಸಲಾಯಿತು.

 

ಇದೇ ಸಂದರ್ಭ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಕಲ್ಲುಗುಂಡಿ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಕುರ್ಚಿಗಳನ್ನು ಯಶಸ್ವಿ ಯುವಕಮಂಡಲದ ವತಿಯಿಂದ ವಿತರಿಸಲಾಯಿತು.
ಈ ಸಂದರ್ಭ ಯುವಕ ಮಂಡಲದ ಗೌರವ ಅಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು , ಗೌರವ ಸಲಹೆಗಾರರು ಸೇರಿ ಸದಸ್ಯರು ಉಪಸ್ಥಿತರಿದ್ದರು.