ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ಸಂಪೂರ್ಣ ತನಿಖಾ ವರದಿ ಎನ್ ಐ ಎ ಗೆ ಹಸ್ತಾಂತರ

0

 

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ಎಲ್ಲಾ ತನಿಖಾ ವರದಿಯನ್ನು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯಿಂದ ರಾಷ್ಟ್ರೀಯ ತನಿಖಾ ದಳಕ್ಕೆ ಎನ್ ಐ ಎ ಗೆ ಇಂದು ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ 20 ದಿನಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಆಲೋಕ್ ಕುಮಾರ್ ನೇತೃತ್ವದಲ್ಲಿ ಹಾಗೂ ಮಂಗಳೂರು ಎಸ್ ಪಿ ರಿಷಿಕೇಶ್ ಸೋನಾವಣೆ, ಪುತ್ತೂರು ಡಿ ವೈ ಎಸ್ ಪಿ ಡಾ. ಗಾನ ಪಿ ಕುಮಾರ್ ರವರ ತಂಡ ಮಾಹಿತಿಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿ ಅವರ ಆರೋಪ ಪಟ್ಟಿಯೊಂದಿಗೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸ್ ಕಸ್ಟಡಿಯಲ್ಲಿದ್ದ ಮೂವರು ಮುಖ್ಯ ಆರೋಪಿಗಳನ್ನು ಇಂದು ಮತ್ತೊಮ್ಮೆ ಸುಳ್ಯ ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ನ್ಯಾಯಾಲಯ ಅವರಿಗೆ ಅಗಸ್ಟ್ 24ರ ವರೆಗೆ ನ್ಯಾಯಾಂಗ ಬಂಧನದ ಆದೇಶವನ್ನು ನೀಡಿದ ಬಳಿಕ ಈ ಎಲ್ಲಾ ತನಿಖೆಗಳ ವರದಿಯನ್ನು ಎನ್ಐಎಗೆ ಹಸ್ತಾಂತರಿಸಲಾಯಿತೆಂದು ತಿಳಿದು ಬಂದಿದೆ.
ಇನ್ನು ಮುಂದಿನ ವಿಚಾರಣೆಗಳು ಬೆಂಗಳೂರಿನಲ್ಲಿ ಎನ್ ಐ ಎ ಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು ಕೇಂದ್ರ ಮಟ್ಟದ ಅಧಿಕಾರಿಗಳು ಮುಂದಿನ ತನಿಖೆ ಯನ್ನು ಕೈಗೊಳ್ಳಲಿದ್ದಾರೆ.