ಗೂನಡ್ಕ: ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಗೂನಡ್ಕ ಶ್ರೀ ಶಾರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ, ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ನೆರವೇರಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಚಂದ್ರ ಕಲ್ಲುಗದ್ದೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಅವರು ಗೌರವ ಶಿಕ್ಷಕರಿಗೆ ವೇತನ ನೀಡಲು ರೂ 5000 ನೀಡಿದರು. ಸಜ್ಜನ ಪ್ರತಿಷ್ಠಾನದ ಸ್ಥಾಪಕರಾದ ಡಾ.ಉಮ್ಮರ್ ಬೀಜದಕಟ್ಟೆ ಅವರು ಗೌರವ ಶಿಕ್ಷಕರಿಗೆ ವೇತನ ನೀಡಲು ರೂ 10000 ಚೆಕ್ ನೀಡಿದರು. ಸಂಚಾಲಕರಾದ ಎಸ್ ಪಿ ಲೋಕನಾಥ್ ಮತ್ತು ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ದೋಳ ವೀರಪ್ಪಗೌಡ, ಆಡಳಿತ ಮಂಡಳಿಯ ಸದಸ್ಯರಾದ ಹಾಜಿ ಅಬ್ದುಲ್ ಪಿ ಎ, ಕೆ ಪಿ ಜಗದೀಶ್, ವಿ ಎಸ್ ಎಸ್ ಬ್ಯಾಂಕಿನ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್ ಹಾಗೂ ಶ್ರೀ ಕೃಷ್ಣ ಗೆಳೆಯ ಬಳಗದ ಅಧ್ಯಕ್ಷ ವರದರಾಜ್ ಎಸ್ ಟಿ, ಸದಸ್ಯರು ಗೌರವ ಶಿಕ್ಷಕರಿಗೆ ವೇತನ ನೀಡಲು ರೂ.5000 ಧನ ಸಹಾಯ ನೀಡಿದರು.

ಪಿ ಎನ್ ಗಣಪತಿ ಭಟ್ ಸ್ವಾಗತಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಮಧುಶ್ರೀ, ಶ್ರೀಮತಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಜಿ ಹನುಮಂತಪ್ಪ ವಂದಿಸಿದರು. ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಊರಿನ ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಪೋಷಕರು ಉಪಸ್ಥಿತರಿದ್ದರು.