ರೋಟರಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

0

 

ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಿಸಲಾಯಿತು. ರೋಟರಿ ಸುಳ್ಯದ ಅಧ್ಯಕ್ಷರಾಗಿರುವ ರೊ.ಚಂದ್ರಶೇಖರ್ ಪೇರಾಲ್ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವ ಸಂಭ್ರಮ ಹಾಗೂ ರಾಷ್ಟ್ರ ಧ್ವಜ, ರಾಷ್ಟ್ರಗೀತೆಗೆ ಗೌರವ ನೀಡುವ ಕುರಿತು ಮಾತನಾಡಿದರು.

ವಿದ್ಯಾಸಂಸ್ಥೆಯ ಸಂಚಾಲಕರಾದ ರೊ.ಗಿರಿಜಾಶಂಕರ್ ತುದಿ ಯಡ್ಕ ಮಾತನಾಡಿ ಅಮೃತ ಮಹೋತ್ಸವ ಆಚರಿಸುವ ಈ ಸುದಿನದಂದು ದೇಶಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ವೀರ ಯೋಧರನ್ನು ನೆನೆಯಬೇಕು. ದೇಶಕ್ಕಾಗಿ ನಾವು ಕಾರ್ಯ ಮಾಡುವ ಸಂಕಲ್ಪ ಮಾಡಿದರೆ ಸ್ವಾತಂತ್ರ್ಯೋತ್ಸವದ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು,ರೋಟರಿ ಸುಳ್ಯ ದ ಹಿರಿಯಸದಸ್ಯರು, ರೋಟರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯ ಶಿಕ್ಷಕಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ, ಇತ್ತೀಚೆಗೆ ನಿವೃತ್ತರಾದ ಶ್ರೀ ಅಚ್ಯುತ ಅಟ್ಲೂರು , ವಿದ್ಯಾ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು , ಪೋಷಕರು ಹಾಗೂ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಭಾಷಣ, ಪ್ರಬಂಧ, ದೇಶಭಕ್ತಿ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಶಾಲಾ ನಾಯಕಿ ಕು.ಅನುಜ್ಞಾ. ಎನ್.ಹೆಚ್ ಕಾರ್ಯಕ್ರಮ ನಿರ್ವಹಿಸಿದರು. 10 ನೇ ತರಗತಿ ವಿದ್ಯಾರ್ಥಿನಿ ಸನಿಹ ಶೆಟ್ಟಿ ಸ್ವಾಗತಿಸಿ , ಕು. ರಮ್ಯ ಪಾರ್ವತಿ ವಂದಿಸಿದರು.