ಆ.20ರಂದು ಜಾಲ್ಸೂರಿನಲ್ಲಿ ಸಚಿವರು , ತಹಶಿಲ್ದಾರ್ ಮತ್ತು ತಾಲೂಕು ಅಧಿಕಾರಿಗಳ ಗ್ರಾಮವಾಸ್ತವ್ಯ

0

 

ತಹಶಿಲ್ದಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕನಕಮಜಲು ಗ್ರಾಮದಲ್ಲಿ ಸಚಿವರು, ತಹಶಿಲ್ದಾರ್ ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮವು ಜಾಲ್ಸೂರು ಗ್ರಾ.ಪಂ. ಸಭಾಭವನದಲ್ಲಿ ಆ.20ರಂದು ನಡೆಯಲಿದೆ.


ಈ ಕುರಿತು ಪೂರ್ವಭಾವಿ ಸಭೆಯು ತಹಶಿಲ್ದಾರ್ ಕು. ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ಆ.17ರಂದು ಜಾಲ್ಸೂರಿನಲ್ಲಿ ನಡೆಯಿತು.
ಆ.20ರಂದು ನಡೆಯುವ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರು ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ತಹಶಿಲ್ದಾರ್ ಕು. ಅನಿತಾಲಕ್ಷ್ಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು , ಜಾಲ್ಸೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.
ಜಾಲ್ಸೂರಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳ ಪಾಲ್ಗೊಳ್ಳುವಿಕೆಯಲ್ಲಿ ಗ್ರಾಮವಾಸ್ತವ್ಯವು ನಡೆಯಲಿದ್ದು, ಗ್ರಾಮದ ಬೇಡಿಕೆಗಳ ಪಟ್ಟಿ ತಯಾರಿಸಲಾಗುವುದು ಎಂದು ಪೂರ್ವಭಾವಿ ಸಭೆಯಲ್ಲಿ ತಹಶಿಲ್ದಾರ್ ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಎಂ. , ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ವಿಜಯ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಈಶ್ವರ ನಾಯ್ಕ ಕುಕ್ಕಂದೂರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.