ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಯೋಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇದರ ವತಿಯಿಂದ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ, ಜಾಲ್ಸೂರು ಇಲ್ಲಿ ಆ. 17 ರಂದು ನಡೆದ ಪ್ರಾಥಮಿಕ ವಿಭಾಗದ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜ ಇಲ್ಲಿಯ ವಿದ್ಯಾರ್ಥಿಗಳಾದ ಅರ್ಚನಾ.ಕೆ ಮತ್ತು ಯಶಸ್ವಿ ಅವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಎಂ. ತರಬೇತಿ ನೀಡಿದ್ದಾರೆ.