ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

 

ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆೆಗಳಲ್ಲಿ
ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆ.18ರಂದು ಆಚರಿಸಲಾಯಿತು.
ಬೆಳಗ್ಗೆೆ ದೀಪಪ್ರಜ್ವಲನ ಮತ್ತು ಸರಸ್ವತಿ ವಂದನ ಕಾರ್ಯಕ್ರಮ ನಡೆಯಿತು.

 

ನಂತರ ಶ್ರೀಕೃಷ್ಣ ವೇಷದಾರಿ ವಿದ್ಯಾಾರ್ಥಿಗಳಿಗೆ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಂದ ಭಜನೆ ನಡೆಯಿತು.
ವಿದ್ಯಾಾರ್ಥಿಗಳಿಗೆ ಮತ್ತು ಪೋಷಕರಿಗೆ ಮಡಕೆ ಒಡೆಯುವ ಸ್ಪರ್ಧೆ, ತಾಯಂದಿರಿಗೆ ಮತ್ತು ಅಧ್ಯಾಪಕರಿಗೆ ಸಂಗೀತ ಕುರ್ಚಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಧ್ಯಾಹ್ನ ಶ್ರೀಕೃಷ್ಣ ದೇವರಿಗೆ ಪೂಜೆ ನಡೆಯಿತು.