ಯೋಗ ಸ್ಪರ್ಧೆಯಲ್ಲಿ ಹಂಶಿತ್ ಕುಮಾರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

 

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಂಶಿತ್ ಕುಮಾರ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಇವನು ಕೃಷಿಕ, ಅಡ್ಕಾರ್ ಶರತ್ ಕುಮಾರ್ ಹಾಗೂ ಶೋಭಾ ದಂಪತಿಗಳ ಪುತ್ರ. ಯೋಗ ಶಿಕ್ಷಕರಾದ ಸಂತೋಷ್ ಮುಂಡಕಜೆ ಇವರ ಶಿಷ್ಯ.