ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಅಮಾನತಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಆಗ್ರಹ

0


ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ಧರಾಮಯ್ಯರವರು ಕೊಡಗು ಜಿಲ್ಲೆಯಲ್ಲಿ ಆದ ಪ್ರಕೃತಿ ವಿಕೋಪ ಹಾನಿಯ ವೀಕ್ಷಣೆಗೆ ಬಂದಾಗ ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿ ಘೇರಾವ್ ಹಾಗೂ ಮೊಟ್ಟೆ ಎಸೆತ ಮಾಡಿರುವುದು ಖಂಡನೀಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ಆಗ್ರಹಿಸಿದ್ದಾರೆ.
ರಾಜ್ಯ ಬಿಜೆಪಿ ಆಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಇವರ ಆಡಳಿತದಲ್ಲಿ ಕಾಂಗ್ರೆಸ್ ನಾಯಕರುಗಳಿಗೆ ಕಾಂಗ್ರೆಸ್ ಕಾರ್ಯಕರ್ತರೇ ರಕ್ಷಣೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆಯ ಜವಾಬ್ದಾರಿ ಹೊತ್ತಿರುವ ಗೃಹ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಹೇಳಿಕೆಯಲ್ಲಿ ಅವರು ಒತ್ತಾಯಿಸಿದ್ದಾರೆ.