ಬೆಳ್ಳಾರೆ: ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ

0

 

ಗ್ರಾ.ಪಂ. ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ, ಮಾಸ್ತಿಕಟ್ಟೆ, ನೆಟ್ಟಾರು, ಪಾಟಾಜೆ, ಕಲ್ಲೋಣಿ ಮತ್ತು ದರ್ಖಾಸ್ತು ಅಂಗನವಾಡಿ ಕೇಂದ್ರಗಳ ಸಹಕಾರದೊಂದಿಗೆ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಆ.19ರಂದು ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಬೆಳ್ಳಾರೆ ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕುಸುಮ ಕುರುಂಬುಡೇಲುರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಭಾಗವಹಿಸಿ ಶುಭ ಹಾರೈಸಿದರು. ಬೆಳ್ಳಾರೆ ಕ್ಲಸ್ಟರ್ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.


ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ಚಾವಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ನೇಹಶ್ರೀ ಮಹಿಳಾ ಮಂಡಲದ ಸದಸ್ಯೆ ಇಂದಿರಾ ಅಜಪಿಲ ಸ್ವಾಗತಿಸಿ, ಕಾರ್ಯದರ್ಶಿ ಸೌಮ್ಯ ಮೂಡಾಯಿತೋಟ ವಂದಿಸಿದರು. ಪೂರ್ಣಿಮಾ ನೆಟ್ಟಾರು ಪ್ರಾರ್ಥಿಸಿ, ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಪೂರ್ಣಿಮಾ ಪಡ್ಪು ಕಾರ್ಯಕ್ರಮ ನಿರೂಪಿಸಿದರು.