ನಾಳೆ (ಆ.21ರಂದು) ಕೇರ್ಪಳ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

ಸುಳ್ಯದ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ 30ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಗಸ್ಟ್ 21ರಂದು ಕೇರ್ಪಳ ಶಾಲಾ ವಠಾರದಲ್ಲಿ ನಡೆಯಲಿರುವುದು. ಬೆಳಗ್ಗೆ ಸಭಾ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಪುಟಾಣಿ ಮಕ್ಕಳ ಮುದ್ದುಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದೆ. ಬಳಿಕ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ರೀತಿಯ ಆಟೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯುವುದು ಎಂದು ಸಂಘಟಕರು ತಿಳಿಸಿದ್ದಾರೆ. ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ.