ಸುಬ್ರಹ್ಮಣ್ಯ : ಕೆ.ಎಸ್‌. ಎಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

 

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟದ ಭರವಸಾ ಕೋಶ ಇದರ ಸಹಯೋಗದೊಂದಿಗೆ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆ.18 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಸಂಚಾಲಕ ಮೋಹನ್ ರಾಮ್ ಸುಳ್ಳಿ ವಹಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯೆ ಶ್ರೀಮತಿ ಶೋಭಾ ಗಿರಿಧರ್ ಕಾರ್ಯಕ್ರಮ ಉದ್ಘಾಟಿಸಿದರು. ಆಂತರಿಕ ಗುಣಮಟ್ಟದ ಭರವಸಾ ಕೋಶ ಇದರ ಸಂಯೋಜಕರಾದ ಡಾ. ಗೋವಿಂದ ಎನ್.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ಸ್ವಾಗತಿಸಿದರು.
ಶ್ರೀಮತಿ ಶೀಲತ ಕಮಿಲಾ ವಂದಿಸಿದರು. ಕುಮಾರಿ ವೈಷ್ಣವಿ ಮತ್ತು ಶರಣ್ಯ ಪ್ರಾರ್ಥಿಸಿದರು. ಶ್ರೀಮತಿ ಸುಮಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಪ್ರಸಾದ್ ಎನ್, ಶ್ರೀಮತಿ ಲತಾ ಬಿ. ಟಿ, ಶ್ರೀ ರಮನಾಥ ಕಾರ್ಯಕ್ರಮವನ್ನು ಸಂಯೋಜಿಸಿದರು.