ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಯ ತಾತ್ಕಾಲಿಕ ಆಯ್ಕೆ

0

 

 

ಆ.19 ರಂದು ಸುಳ್ಯ ತಾಲೂಕು ಅಂಗನವಾಡಿ ಕಾರ್ಯಕರ್ತ/ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ನಡೆದ ತಾತ್ಕಲಿಕ ಆಯ್ಕೆ ಪ್ರಕ್ರಿಯೆಯಲ್ಲಿ ಸುಳ್ಯ ತಾಲೂಕಿನ 6 ಅಂಗನವಾಡಿ ಸಹಾಯಕಿಯರ ಹುದ್ದೆಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಹಾಗೂ ಮಂಡೆಕೋಲು, ಮುರುಳ್ಯ, ಐವರ್ನಾಡು, ಅಜ್ಜಾವರ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಸೂಚನಾ ಫಲಕದಲ್ಲಿಯೂ ತಾತ್ಕಲಿಕ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಏನದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಆ. 30ರ ಒಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕಾಗಿ ಈ ಮೂಲಕ ಕೋರಲಾಗಿದೆ.