ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡಿ. ದೇವರಾಜ ಅರಸು ಜನ್ಮದಿನಾಚರಣೆ

0

 

ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಡಿ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಸತಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಕುಸುಮಾ ಮುತ್ಲಾಜೆ ದೀಪ ಬೆಳಗಿಸಿ ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಶಾಲಾ 9ನೇ ವಿದ್ಯಾರ್ಥಿನಿ ಧೃತಿಯವರು ದೇವರಾಜ ಅರಸುರವರ ಬಗ್ಗೆ ಮಾತನಾಡಿದರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.