ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಸದ್ಭಾವನಾ ದಿನಾಚರಣೆ

0

 

 

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸದ್ಭಾವನಾ ದಿನವನ್ನು ಆ. 18ರಂದು ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಅಗದತಂತ್ರ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಯು. ಸ0ತೋಷ್ ನಾಯಕ್‌, ಸದ್ಭಾವನಾ ದಿನದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಾಧಿಕಾರಿ ಡಾ. ಪ್ರಮೋದ ಪಿ.ಎ.. ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಮತ್ತು ಎನ್.ಎಸ್.ಎಸ್‌. ವಿದ್ಯಾರ್ಥಿಗಳು
ಭಾಗವಹಿಸಿದರು.