ನಾಳೆ (ಆ. 21ರಂದು) ರೆಂಜಾಳ ಶಾಸ್ತಾವು ಯುವಕ ಮಂಡಲದ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ನಾಳೆ (ಆ.21) ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದಲ್ಲಿ ನಡೆಯಲಿದೆ. ಬೆಳಗ್ಗೆ 9.00 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆದು ಬಳಿಕ ಮಕ್ಕಳಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ.